ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ..! - ಸಿಎಂ ಯಡಿಯೂರಪ್ಪ
ಶಿವಮೊಗ್ಗ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಪ್ರವಾಸದಲ್ಲಿರುವ ಸಿಎಂ ಯಡಿಯೂರಪ್ಪ ಇಂದು ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಬಳಿಕ ಮಾತನಾಡಿದ ಅವರು ಕರ್ನಾಟಕ ರಾಜ್ಯದಲ್ಲಿ ನೀರಾವರಿ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಲಿದ್ದೇನೆ. ಶಿಕಾರಿಪುರ ಕ್ಷೇತ್ರದಲ್ಲಿ 1,300 ಕೋಟಿ ರೂಪಾಯಿ ವೆಚ್ಚದ ನೀರಾವರಿ ಯೋಜನೆಗೆ ಟೆಂಡರ್ ಕರೆಯಲಾಗಿದೆ. ಇನ್ನು ಹದಿನೈದು ದಿನದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ. ಜೊತೆಗೆ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.