ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ಸಿಎಂ ಭೇಟಿ - ಗೋವಿಂದ ಕಾರಜೋಳ ಮಧುಕೇಶ್ವರ ದೇವಸ್ಥಾನ ಭೇಟಿ ನ್ಯೂಸ್
ಶಿರಸಿ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ನಿಮಿತ್ತ ಶಿರಸಿ ತಾಲೂಕಿನ ಬನವಾಸಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇತಿಹಾಸ ಪ್ರಸಿದ್ದ ಬನವಾಸಿಯ ಮಧುಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಗೆಲುವಿಗೆ ಪ್ರಾರ್ಥಿಸಿದರು. ಪ್ರಚಾರ ಸಭೆಗೆ ಆಗಮಿಸಿದ್ದ ಅವರು ಹೆಲಿಪ್ಯಾಡ್ ನಿಂದ ನೇರವಾಗಿ ದೇವಸ್ಥಾನಕ್ಕೆ ತೆರಳಿ ಅಭ್ಯರ್ಥಿಗಳ ವಿಜಯಕ್ಕೆ ಬೇಡಿಕೊಂಡರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸಾಥ್ ನೀಡಿದರು.