ಬಣ್ಣ-ಬಣ್ಣದ ದೀಪಾಲಂಕಾರಗಳಿಂದ ಕಂಗೊಳಿಸುತ್ತಿರುವ ಹಂಪಿ ಸ್ಮಾರಕಗಳು! - ಹಂಪಿ ಉತ್ಸವ
ಹಂಪಿ ಉತ್ಸವದ ಅಂಗವಾಗಿ ಇಲ್ಲಿನ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ದೀಪಗಳಿಂದ ಕಂಗೊಳಿಸುತ್ತಿರುವ ಕಡಲೆಕಾಳು ಹಾಗೂ ಸಾಸಿವೆ ಕಾಳು ಗಣೇಶನ ಸ್ಮಾರಕಗಳು ನೋಡುಗರ ಕಣ್ಮನ ಸೆಳೆಯುತ್ತಿವೆ. ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಕಬ್ಬಿಣದ ಸಲಾಕೆ ಹಾಗೂ ರಥಬೀದಿಯ ಮರಗಳಿಗೆ ಕೂಡ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಹಂಪಿಗೆ ಆಗಮಿಸಿದ ಪ್ರವಾಸಿಗರು ಸ್ಮಾರಕಗಳ ಸುಂದರ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯುತ್ತಿದ್ದಾರೆ.