ಕೊಡೇರಿ ದೋಣಿ ದುರಂತ: ಮೃತರ ಕುಟುಂಬಸ್ಥರಿಗೆ ಪರಿಹಾರದ ಚೆಕ್ ಹಸ್ತಾಂತರ
ಬೈಂದೂರು ತಾಲೂಕು ಕೊಡೇರಿ ದೋಣಿ ದುರಂತದಲ್ಲಿ ಮೃತಪಟ್ಟ ನಾಲ್ವರು ಮೀನುಗಾರರ ಕುಟುಂಬಸ್ಥರಿಗೆ ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಮತ್ತು ಸಚಿವ ಕೋಟ ಶ್ರೀನಿವಾಸ ಪೂಜಾರಿ 6 ಲಕ್ಷ ರೂಪಾಯಿ ಪರಿಹಾರದ ಚೆಕ್ ಹಸ್ತಾಂತರಿಸಿದ್ದಾರೆ. ಮೃತರ ಕುಟುಂಬಸ್ಥರ ಮನೆಗಳಿಗೆ ಭೇಟಿ ನೀಡಿದ ಜನಪ್ರತಿನಿಧಿಗಳು ಚೆಕ್ ವಿತರಿಸಿ ಸಾಂತ್ವನ ಹೇಳಿದರು.