ರೈತ ವಿರೋಧಿ ಕಾಯ್ದೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ! - Congress protests against central government
ಶಿವಮೊಗ್ಗ: ರೈತ ವಿರೋಧಿ ಕಾಯ್ದೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆಡಳಿತ ವೈಫಲ್ಯ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ನಗರದ ಶಿವಪ್ಪನಾಯಕ ವೃತ್ತದಿಂದ ನೆಹರು ರಸ್ತೆ ಮಾರ್ಗವಾಗಿ ಗೋಪಿ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಹಟಾವೋ -ದೇಶ್ ಬಚಾವೋ ಎಂಬ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.