ಕರ್ನಾಟಕ

karnataka

ETV Bharat / videos

ಪೆಟ್ರೋಲ್, ಡಿಸೇಲ್ ಮತ್ತು ಅಡುಗೆ ಅನಿಲದರ ಏರಿಕೆ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ - ಕಾಂಗ್ರೆಸ್​ ಪ್ರತಿಭಟನೆ

By

Published : Feb 12, 2021, 9:07 PM IST

ಹಾವೇರಿ: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದರ ಏರಿಕೆ ಖಂಡಿಸಿ ಹಾವೇರಿ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿದ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ದೆಹಲಿಯ ರೈತ ಹೋರಾಟದಲ್ಲಿ ಹುತಾತ್ಮರಾದ ರೈತರಿಗೆ ಮೌನಾಚರಣೆ ಮೂಲಕ ಗೌರವ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಬಸವರಾಜ್ ಶಿವಣ್ಣನವರ್ ಸೇರಿದಂತೆ ಮುಖಂಡರು ಪಾಲ್ಗೊಂಡಿದ್ದರು.

ABOUT THE AUTHOR

...view details