'ರಾಜ್ಯ ಸರ್ಕಾರವನ್ನು ವಜಾಗೊಳಿಸಿ', ಧಾರವಾಡ ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ - ರಾಜ್ಯ ಸರ್ಕಾರವನ್ನು ವಜಾಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ
ಧಾರವಾಡ: ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಗೃಹಮಂತ್ರಿ ಅಮಿತ್ ಶಾರನ್ನು ಕೇಂದ್ರ ಸಚಿವ ಸಂಪುಟದಿಂದ ಕೈ ಬಿಡಬೇಕು. ಅತೃಪ್ತ ಶಾಸಕರ ರಾಜೀನಾಮೆಗೆ ಅಮಿತ್ ಶಾ ಕುಮ್ಮಕ್ಕು ಕೊಟ್ಟಿರುವುದನ್ನು ಯಡಿಯೂರಪ್ಪ, ಆಡಿಯೋದಲ್ಲಿ ಬಹಿರಂಗವಾಗಿ ಹೇಳಿದ್ದಾರೆ. ಯಡಿಯೂರಪ್ಪ ಮತ್ತು ಅಮಿತ್ ಶಾ ಅವರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಕೂಡಲೇ ರಾಜ್ಯ ಸರ್ಕಾರ ವಜಾಗೊಳಿಸಿ ಎಂದು ಧಾರವಾಡ ಜಿಲ್ಲಾದಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
TAGGED:
protest in Dharwad