ಡಿಕೆಶಿ ಬಂಧನ ಖಂಡಿಸಿ ಬೀದರ್ ನಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ...! - ಅಮಿತ್ ಶಾ
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನದ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿ ಬೀದರ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ನಗರದ ಅಂಬೇಡ್ಕರ್ ವೃತದಲ್ಲಿ ಜಮಾಯಿಸಿದ ಕಾರ್ಯಕರ್ತರು ಬಿಜೆಪಿ ಇಡಿ ಮೂಲಕ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಸ್ಕೇಚ್ ಹಾಕಿ ಬಂಧನ ಮಾಡಿಸಿದೆ. ದೇಶದಲ್ಲಿ ವಿರೋಧ ಪಕ್ಷಗಳು ಬುಡ ಸಮೇತ ಕಿತ್ತು ಹಾಕುವ ದುರುದ್ದೇಶದಿಂದ ಬಿಜೆಪಿ ಈ ರೀತಿ ಕೈ ನಾಯಕರ ಮೇಲೆ ಜಾರಿ ನಿರ್ದೇಶನಾಲಯದ ಗದಾ ಪ್ರಹಾರ ಮಾಡಿದೆ ಎಂದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ , ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು.