ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಸೈಕಲ್ ಜಾಥಾ ನಡೆಸುವ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯಾಗುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ಇಂಧನ ಬೆಲೆಯನ್ನು ಇಳಿಸಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.