ಸತೀಶ್ ಜಾರಕಿಹೊಳಿ ರಾಜಕೀಯ ಭವಿಷ್ಯ ಮುಗಿಸಲು ಕಾಂಗ್ರೆಸ್ ಯತ್ನ: ಶಾಸಕ ರಾಜುಗೌಡ - attempts to end Satish Zaraki Holl
ಸುರಪುರ: ಸತೀಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಚುನಾವಣೆಗೆ ನಿಲ್ಲಿಸಿ ಅವರ ರಾಜಕೀಯ ಭವಿಷ್ಯವನ್ನು ಕಾಂಗ್ರೆಸ್ನವರು ಮುಗಿಸಲು ಯತ್ನಿಸುತ್ತಿದ್ದಾರೆ ಎಂದು ಶಾಸಕ ರಾಜುಗೌಡ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಮೂರು ಉಪಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಸಿಡಿ ಪ್ರಕರಣ ಸಂಬಂಧ ಕುಟುಂಬಸ್ಥರು ಹೇಳಿದಂತೆ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಅನ್ನೋದು ಜಗಜ್ಜಾಹೀರಾಗಿದೆ. ಇದರಲ್ಲಿ ರಮೇಶ್ ಜಾರಕಿಹೊಳಿ ನಿರಪರಾಧಿಯಾಗಿ ಹೊರ ಬರಲಿದ್ದಾರೆ ಎಂದರು.