ಕರ್ನಾಟಕ

karnataka

ETV Bharat / videos

ಡಿಕೆಶಿ ಬಂಧನ..ರೊಚ್ಚಿಗೆದ್ದ ಕಾರ್ಯಕರ್ತರಿಂದ ಕೇಂದ್ರಕ್ಕೆ ಧಿಕ್ಕಾರ, ಪ್ರತಿಕೃತಿ ದಹನ - ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

By

Published : Sep 4, 2019, 9:48 PM IST

ದಾವಣಗೆರೆ: ಅಕ್ರಮ ಹಣ ವರ್ಗವಣೆ ತನಿಖೆಗೆ ಪೂರಕವಾಗಿ ಸ್ಪಂದಿಸುತ್ತಿಲ್ಲ ಎನ್ನುವ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತವಾಯಿತು. ಡಿ.ಕೆ.ಶಿವಕುಮಾರ್ ಬಂಧನವಾಗುತ್ತಿದ್ದಂತೆ ರಾಮನಗರ, ಕನಕಪುರ, ಬಳ್ಳಾರಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ತಡ ರಾತ್ರಿವರೆಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿ ಟೈರ್​ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಜಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಪ್ರವಾಸಿ ಮಂದಿರದಿಂದ ಮಹಾತ್ಮ ಗಾಂಧಿ ಬಸ್ ನಿಲ್ದಾಣದ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ, ಪ್ರಧಾನಿ ನರೇಂದ್ರ ‌ಮೋದಿ ಹಾಗೂ ಅಮಿತ್ ಶಾ ಅವರ ವಿರುದ್ದ ಧಿಕ್ಕಾರ ಕೂಗಿ ಪ್ರತಿಕೃತಿ ದಹಿಸಿದರು.

ABOUT THE AUTHOR

...view details