ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಾದಯಾತ್ರೆ: ಚಿಕ್ಕಬಳ್ಳಾಪುರ ನಗರದಲ್ಲಿ ಫ್ಲೆಕ್ಸ್ಗಳದ್ದೇ ಭರಾಟೆ - ಕಾಂಗ್ರೆಸ್ ಪ್ರತಿಭಟನೆ‘
ಚಿಕ್ಕಬಳ್ಳಾಪುರ: ತೈಲ ಸೇರಿದಂತೆ ಗೃಹಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮುಖಂಡರು ಹಮ್ಮಿಕೊಂಡಿರುವ ಜನಧ್ವನಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರದಲ್ಲಿ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಈ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಂಸದ ವೀರಪ್ಪ ಮೊಯ್ಲಿ ಸೇರಿದಂತೆ ಇತರರು ಭಾಗಿಯಾಗಲಿದ್ದಾರೆ.