ಡಿಕೆಶಿ ಅರೆಸ್ಟ್... ಮಂಡ್ಯ, ಹಾಸನದಲ್ಲಿ ಕಾರ್ಯಕರ್ತರ ಪ್ರೊಟೆಸ್ಟ್ - mandya
ಅಕ್ರಮ ಆಸ್ತಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಬಂಧಿಸಿರುವ ಹಿನ್ನಲೆ ಮಂಡ್ಯ ಹಾಗೂ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಮಳವಳ್ಳಿ ತಾಲೂಕಿನ ಹಲಗೂರು ಹಾಗೂ ದಳವಾಯಿ ಕೋಡಿಹಳ್ಳಿ ಬಳಿ ರಸ್ತೆ ತಡೆಹಿಡಿಯಲಾಗಿದ್ದು, ಮೈಸೂರು- ಕನಕಪುರ ಹೆದ್ದಾರಿಯನ್ನು ತಡೆದು ಟೈರ್ಗೆ ಬೆಂಕಿ ಹಚ್ಚುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.