ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ..! - ಹುಬ್ಬಳ್ಳಿ ಲೇಟೆಸ್ಟ್ ನ್ಯೂಸ್
ಹುಬ್ಬಳ್ಳಿ: ನಿರಂತರವಾಗಿ ಏರುತ್ತಿರುವ ತೈಲ ಬೆಲೆ ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದರು. ದುರ್ಗದಬೈಲ್ನಲ್ಲಿ ಕೇಂದ್ರ ಸರ್ಕಾರದ ಅಣಕು ಶವಯಾತ್ರೆ ಮಾಡಿ, ಘೋಷಣೆ ಕೂಗಿದರು. ಚುನಾವಣೆಗೂ ಮುನ್ನ ಇಂಧನ ಬೆಲೆ ಕಡಿಮೆ ಮಾಡುವುದಾಗಿ ಬಿಜೆಪಿ ನಾಯಕರು ಆಶ್ವಾಸನೆ ಕೊಟ್ಟಿದ್ದರು. ಆದರೆ, ಅಧಿಕಾರಕ್ಕೆ ಬಂದ ಮೇಲೆ ತೈಲ ಬೆಲೆ ಏರಿಸುವ ಮೂಲಕ ಜನರ ಜೀವನದ ಜತೆ ಆಟವಾಡುತ್ತಿದ್ದಾರೆ ಎಂದು ದೂರಿದರು.