ಕರ್ನಾಟಕ

karnataka

By

Published : Jan 22, 2021, 9:21 PM IST

ETV Bharat / videos

ಮೂಡಬಿದಿರೆಯ ಮಾರೂರಿನಲ್ಲಿ ಮದ್ಯದಂಗಡಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರೂರು ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಮಹಿಳಾ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಮಾರೂರು ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವುದಕ್ಕೆ ಗ್ರಾಮಸ್ಥರ ವಿರೋಧ ಇದೆ. ಆದರೆ ಆಡಳಿತ ಪಕ್ಷದ ಜನಪ್ರತಿನಿಧಿಗಳ ಕುಮ್ಮಕ್ಕಿನಿಂದ ಮದ್ಯದಂಗಡಿ ತೆರೆಯುವುದಕ್ಕೆ ಪ್ರಯತ್ನಗಳಾಗುತ್ತಿವೆ. ನ್ಯಾಯಯುತವಾಗಿ ಹೋರಾಟ ನಡೆಸಿದರೂ ಮೂಡುಬಿದಿರೆ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಅಹವಾಲು ಸ್ವೀಕರಿಸಲು ಬರುವುದಿಲ್ಲ ಎಂದು ಕಾರ್ಯಕರ್ತರು ದೂರಿದರು.

ABOUT THE AUTHOR

...view details