ದಾವಣಗೆರೆ ಪಾಲಿಕೆ... ಬಿಜೆಪಿಗೆ ಮುಖಭಂಗ, ಕೈಗೆ ಬೆಣ್ಣೆದೋಸೆ! - ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಕಮಾಲ್ ಮಾಡಿದೆ. 45ರಲ್ಲಿ 22 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಕೈ ಹೊರಹೊಮ್ಮಿದೆ. ಇನ್ನು ಅಬ್ಬರದ ಪ್ರಚಾರ ಮಾಡಿದ್ದ ಬಿಜೆಪಿ 17 ಸ್ಥಾನಗಳಲ್ಲಿ ತೃಪ್ತಿಪಟ್ಟುಕೊಂಡರೆ, ಪಕ್ಷೇತರರು 5 ಮಂದಿ ಹಾಗೂ ಜೆಡಿಎಸ್ನ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತೆ ಪಾಲಿಕೆಯಲ್ಲಿ ದರ್ಬಾರ್ ನಡೆಸುತ್ತೆ ಎಂಬ ವಿಶ್ವಾಸದಲ್ಲಿ ಕೈ ಇದ್ದರೆ, ಕಮಲ ಅಧಿಕಾರದ ಗದ್ದುಗೆ ಏರಲು ತೆರೆಮರೆ ಕಸರತ್ತು ಆರಂಭಿಸಿದೆ.