ಡಿಕೆಶಿಗೆ ಜಾಮೀನು: ಕಾಂಗ್ರೆಸ್ ಕಾರ್ಯಕರ್ತರಿಂದ ಸಿಹಿ ಹಂಚಿ ಸಂಭ್ರಮಾಚರಣೆ... - ಧಾರವಾಡ ಸುದ್ದಿ
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ ಕಾರಣ ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ನಗರದ ಸುಭಾಸ್ ರಸ್ತೆಯಲ್ಲಿರುವ ವಿವೇಕಾನಂದ ವೃತ್ತದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಖುಷಿ ಪಟ್ಟರು. ಹಾಗೆಯೇ ಡಿಕೆಶಿ ಬಿಡುಗಡೆ ಹಿನ್ನೆಲೆ ನೆಲಮಂಗಲದ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು. ತಾಲೂಕು ಕಚೇರಿ ಮುಂದೆ ಪಟಾಕಿ ಸಿಡಿಸಿ ಕುಣಿದಾಡಿದರು. ಪರಸ್ಪರ ಸಿಹಿ ಹಂಚಿ ಸಂತಸ ಹಂಚಿಕೊಂಡರು.