ಧಾರಾಕಾರ ಮಳೆಗೆ ವಿಜಯಪುರದ ಹುಲಗಬಾಳ ತಾಂಡಕ್ಕೆ ಹೋಗುವ ರಸ್ತೆ ಸಂಪರ್ಕ ಕಡಿತ
ವಿಜಯಪುರ: ನಿನ್ನೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಅಡವಿ ಹುಲಗಬಾಳ ಎಂಬ ಗ್ರಾಮದ ತಾಂಡಾಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಜನರು ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ.