ತಿರುಪತಿಯಲ್ಲಿ ಕಲ್ಯಾಣ ಮಂಟಪ ಹಾಗೂ ವಸತಿ ಗೃಹಗಳ ನಿರ್ಮಾಣಕ್ಕೆ ಟಿಟಿಡಿ ಒಪ್ಪಿಗೆ - ಸಿಎಂ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಟಿಟಿಡಿ ಅಧ್ಯಕ್ಷ ಎಂ.ವಿ ಸುಬ್ಬಾರೆಡ್ಡಿ ಅವರ ಜೊತೆ ಔಪಚಾರಿಕವಾಗಿ ಚರ್ಚೆ ನಡೆಸಲಾಯಿತು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಎಂ.ವಿ. ಸುಬ್ಬಾರೆಡ್ಡಿ ಅವರು ಅರ್ಧಗಂಟೆಗಳ ಕಾಲ ಚರ್ಚೆ ನಡೆಸಿದರು. ರಾಜ್ಯ ಸರ್ಕಾರ ತಿರುಪತಿಯಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಕಲ್ಯಾಣ ಮಂಟಪ ಮತ್ತು ವಸತಿ ಗೃಹಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸುಮಾರು 15 ವರ್ಷಗಳ ಕಾಲ ಇದ್ದ ಕಾನೂನು ತೊಡಕುಗಳು ಮುಗಿದಿದ್ದು, ಇದೀಗ ಟಿಟಿಡಿ ಅಧ್ಯಕ್ಷರು ಸರ್ಕಾರದ ನಿರ್ಮಾಣ ಕಾರ್ಯಗಳಿಗೆ ಒಪ್ಪಿಗೆ ನೀಡಿದರು.