ಬಿಎಂಟಿಸಿ ಕಂಡಕ್ಟರ್ ಕಂಠದಲ್ಲಿ ಮೂಡಿಬಂತು ಜಾಗೃತಿ ಗೀತೆ
ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ ತನ್ನ ಪ್ರಯಾಣಿಕರಿಗೆ ಜಾಗೃತಿ ಮೂಡಿಸಲು ಮುಂದಾಗಿದ್ದು, ಪ್ರಯಾಣಿಕರೊಂದಿಗೆ ಹೆಚ್ಚು ಒಡನಾಟ ಹೊಂದಿರುವವರು ಕಂಡಕ್ಟರ್ಗಳು, ಹಾಗಾಗಿ ಅವರ ಮೂಲಕವೇ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಕಂಡಕ್ಟರ್ ಗೀತೆಗೆ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಗೀತೆಯಲ್ಲಿ ಸ್ವಚ್ಚತೆಯ ಬಗ್ಗೆ ಹಾಗೂ ಬಸ್ ಹತ್ತುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಜನರಿಗೆ ಸಾಮಾನ್ಯ ಭಾಷೆಯಲ್ಲೇ ಅರ್ಥವಾಗುವ ಹಾಗೆ ಹಾಡಿದ್ದಾರೆ.