ಕೊರೊನಾ ಕಂಟಕ: ಕುಷ್ಟಗಿಯಲ್ಲಿ ಮಧ್ಯಾಹ್ನದವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ತೀರ್ಮಾನ
ಕುಷ್ಟಗಿ: ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ವ್ಯಾಪಾರಸ್ಥರು ತಮ್ಮ ವ್ಯಾಪಾರ ವಹಿವಾಟನ್ನು ನಿಗದಿತ ಸಮಯದಲ್ಲಿ ನಡೆಸಲು ಸ್ವಯಂ ಪ್ರೇರಿತವಾಗಿ ತೀರ್ಮಾನಕ್ಕೆ ಬಂದಿದ್ದಾರೆ. ಈ ಮೂಲಕ ಮಧ್ಯಾಹ್ನದಿಂದ ಸಂಪೂರ್ಣ ಬಜಾರ್ ಬಂದ್ ಮಾಡಲು ನಿರ್ಧರಿಸಿದ್ದಾರೆ. ಈ ಕುರಿತು ಕುಷ್ಟಗಿ ಪಟ್ಟಣದ ವ್ಯಾಪಾರಸ್ಥರು ಸಭೆ ನಡೆಸಿ ಜುಲೈ 08 ರಿಂದ ಜುಲೈ 31 ರವರೆಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲಾಗುತ್ತದೆ.