ವಸತಿ ಶಾಲೆಯ ಪ್ರಾಂಶುಪಾಲ, 31 ಮಕ್ಕಳಿಗೆ ಕೊರೊನಾ ದೃಢ: ಚನ್ನಗಿರಿಯಲ್ಲಿ ಆತಂಕ - Davanagere Corona Explosion
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರು ಮತ್ತು 31 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ವಸತಿ ಶಾಲೆಯಲ್ಲಿ 250ಕ್ಕೂ ಹೆಚ್ಚು ಮಕ್ಕಳಿದ್ದು, ನಿನ್ನೆ ಸಮೀಪದ ಪಾಂಡೋಮಟ್ಟಿ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ 110 ಮಕ್ಕಳಲ್ಲಿ 31 ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದೆ. ಈಗ ಇಂದಿರಾಗಾಂಧಿ ವಸತಿ ಶಾಲೆಯನ್ನು ಕಂಟೈನ್ಮೆಂಟ್ ವಲಯವನ್ನಾಗಿ ಮಾಡಲಾಗಿದೆ. ಈ ಕುರಿತು 'ಈಟಿವಿ ಭಾರತ' ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ.
TAGGED:
Davanagere Corona Explosion