ಕಲಬುರಗಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ: ಸಂಸದ ಉಮೇಶ್ ಜಾಧವ್ - ಏಪ್ರಿಲ್ 14ರ ನಂತರ ಪರಿಸ್ಥಿತಿ ಅವಲೋಕಿಸಿ ಲಾಕ್ಡೌನ್
ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪುರಸಭೆಗೆ ಭೇಟಿ ನೀಡಿದ ಸಂಸದ ಉಮೇಶ್ ಜಾಧವ್, ಏಪ್ರಿಲ್ 14ರ ನಂತರ ಪರಿಸ್ಥಿತಿ ಅವಲೋಕಿಸಿ ಲಾಕ್ಡೌನ್ ಮುಂದುವರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. ಕಲಬುರಗಿಯಲ್ಲಿ ಟೆಸ್ಟಿಂಗ್ ಲ್ಯಾಬ್ ಪ್ರಾರಂಭಿಸಲಾಗಿದ್ದು, ರಾಜ್ಯದ 2ನೇ ಟೆಸ್ಟ್ ಲ್ಯಾಬ್ ಇದಾಗಿದೆ. ಮೈಸೂರು ಭಾಗದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಆದರೆ ನಮ್ಮ ಭಾಗದಲ್ಲಿ ಒಂದಷ್ಟು ನಿಯಂತ್ರಣಕ್ಕೆ ಬಂದಿದೆ. ವಲಸೆ ಹೋದವರು ಎಲ್ಲಿದ್ದೀರೋ ಅಲ್ಲೇ ಇದ್ದು ಸಹಕರಿಸಬೇಕು. ಇದ್ದ ಸ್ಥಳದಲ್ಲಿಯೇ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಜಾಧವ್ ತಿಳಿಸಿದ್ದಾರೆ.