ಚಿಕ್ಕಮಗಳೂರಲ್ಲಿ ಇಂದು ಒಂದು ಕೊರೊನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆ - Chikmagalur Corona news
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಒಬ್ಬರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಈವರೆಗೂ 41 ಜನ ಸೋಂಕಿತರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ತರೀಕೆರೆ ತಾಲೂಕಿನ ಅಜ್ಜಂಪುರ ಮೂಲದ ಓರ್ವ ವಯೋವೃದ್ಧೆ ವೈರಸ್ಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಸೋಂಕಿತ ವಾಸ ಮಾಡುತ್ತಿದ್ದ ಏರಿಯಾವನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಸೋಂಕಿತನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 39 ಸಕ್ರಿಯ ಪ್ರಕರಣಗಳಿವೆ. ಈ ಕುರಿತು ನಮ್ಮ ಪ್ರತಿನಿಧಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯ ಮುಂಭಾಗದಿಂದ ನಡೆಸಿದ ಪ್ರತ್ಯಕ್ಷ ವರದಿ ಇಲ್ಲಿದೆ.