ಟಿ.ನರಸೀಪುರ ತಾಲೂಕಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ ಕಾನ್ಸ್ಟೇಬಲ್ ಗೂ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದ ತಾಲೂಕಿನ ಜನತೆ ಆತಂಕಕ್ಕೀಡಾಗಿದ್ದಾರೆ. ಕಾನ್ಸ್ಟೇಬಲ್ ಮೂಲತಃ ನಂಜನಗೂಡು ತಾಲೂಕಿನ ನಿವಾಸಿಯಾಗಿದ್ದಾರೆ. ಶನಿವಾರ ನಡೆದ ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಭದ್ರತೆಗೆ ಇವರನ್ನು ನಿಯೋಜಿಸಲಾಗಿತ್ತು. ಇದರಿಂದ ಟಿ.ನರಸೀಪುರ ಪೊಲೀಸ್ ಠಾಣೆ ಸೀಲ್ ಡೌನ್ ಮಾಡುವ ಸಾಧ್ಯತೆ ಹೆಚ್ಚಾಗಿದೆ.