ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಕೊರೊನಾ ಕುರಿತು ವಿಶಿಷ್ಟ ಜಾಗೃತಿ- ವಿಡಿಯೋ ಬಿಡುಗಡೆ - ಟ್ರಾಫಿಕ್ ಪೊಲೀಸ್ ಲೇಟೆಸ್ಟ್ ನ್ಯೂಸ್
ಬೆಂಗಳೂರು: ಕೊರೊನಾ ವೈರಸ್ ಎಲ್ಲೆಡೆ ಭಯವನ್ನುಂಟು ಮಾಡಿದೆ. ಈ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚನೆ ಮೇರೆಗೆ ಟ್ರಾಫಿಕ್ ಪೊಲೀಸರು ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ ಭಿತ್ತಿಪತ್ರಗಳನ್ನು ನೀಡುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ ಹೈದರಾಬಾದ್ ಪೊಲೀಸರಂತೆ ಬೆಂಗಳೂರು ಪೊಲೀಸರು ಸ್ವತಃ ರಸ್ತೆ ಮಧ್ಯೆ ನಿಂತು ಜನರಿಗೆ ಮುಂಜಾಗ್ರತಾ ಕ್ರಮಗಳನ್ನು ವಿವರಿಸುವ ಸಿಡಿಯನ್ನು ಬಿಡುಗಡೆಗೊಳಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗ್ತಿದೆ.