ಕೊರೊನಾ ಭೀತಿ: ಮಂಗಳೂರಲ್ಲಿ ಬೀದಿಬದಿ ವ್ಯಾಪಾರಕ್ಕೆ ಬಿತ್ತು ಬ್ರೇಕ್ - ಬೀದಿಬದಿ ವ್ಯಾಪಾರ
ಮಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಬೀದಿಬದಿ ವ್ಯಾಪಾರವನ್ನು ಸ್ಥಗಿತಗೊಳಿಸುವ ಕಾರ್ಯಾಚರಣೆಗಿಳಿದಿದೆ. ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಸ್ವಚ್ಛತೆಗೆ ಆದ್ಯತೆ ನೀಡಿ ಒಂದು ವಾರ ಬೀದಿಬದಿ ವ್ಯಾಪಾರ ಮಾಡದಂತೆ ಪಾಲಿಕೆ ಎಚ್ಚರಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಪಾಲಿಕೆ ಆರೋಗ್ಯಾಧಿಕಾರಿ ಬೀದಿಬದಿ ವ್ಯಾಪಾರ ನಡೆಸುವ ಸ್ಥಳಕ್ಕೆ ಭೇಟಿ ಕೊಟ್ಟು ಅಂಗಡಿಗಳನ್ನು ಮುಚ್ಚಿಸಿದ್ದಾರೆ.