ಕೊರೊನಾ ಭೀತಿಯಲ್ಲಿದ್ದ ಜನತೆಗೆ ಸಿಹಿ ಸುದ್ದಿ ನೀಡಿದ್ರು ಹಾವೇರಿ ಜಿಲ್ಲಾಧಿಕಾರಿ - haveri news District Collector Krishna Bhajapayi
ಹಾವೇರಿ: ಜಿಲ್ಲೆಯಲ್ಲಿ ಯಾರಲ್ಲಿಯೂ ಕೊರೊನಾ ವೈರಸ್ ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೊರೊನಾ ತಡೆಯಲು ಎಲ್ಲಾ ಮುಂಜಾಗೃತಾ ಕ್ರಮಗಳನ್ನ ಕೈಗೊಳ್ಳಲಾಗಿದೆ. ಈ ಕುರಿತಂತೆ ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ರವಾನಿಸಿದ್ದಾರೆ. ಜಿಲ್ಲೆಯಲ್ಲಿ ಎಲ್ಲಿಯೂ ಮಾಸ್ಕ್‌ಗಳ ಕೊರತೆ ಇಲ್ಲ. ಮಾಸ್ಕ್‌ಗಳನ್ನು ಅಧಿಕ ಬೆಲೆಯಲ್ಲಿ ಮಾರಾಟ ಮಾಡುವವರ ವಿರುದ್ಧ ದೂರು ನೀಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.