ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ... ಹೂವುಗಳಿಂದ ದೇವಾಲಯಕ್ಕೆ ಅಲಂಕಾರ - ಹಾಸನಾಂಬ ದೇವಾಲಯ ಪ್ರವೇಶಕ್ಕೆ ನಿಷೇಧ,
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ತಾಯಿಯ ಪೂಜೆಗೆ ಕ್ಷಣಗಣನೆ ಶುರುವಾಗಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ದೇವಾಲಯದ ಬಾಗಿಲು ತೆರೆಯಲಿದ್ದು, ವರ್ಷಕ್ಕೊಮ್ಮೆ ದರ್ಶನ ನೀಡುವ ತಾಯಿಯ ದೇವಾಲಯವನ್ನು ವಿವಿಧ ಹೂವುಗಳಿಂದ ಮದುವಣಗಿತ್ತಿಯಂತೆ ಸಿಂಗರಿಸಲಾಗಿದೆ. ಕೋವಿಡ್ ಹಿನ್ನೆಲೆ ಜಿಲ್ಲಾಡಳಿತ ದೇವಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧಿಸಿ ವಿಶೇಷ ಆಹ್ವಾನಿತ ವಿಐಪಿಗಳಿಗೆ ಮೊದಲ ದಿನ ಹಾಗೂ ಕೊನೆಯ ದಿನ ಅವಕಾಶ ಕಲ್ಪಿಸಿದೆ. ಸಾರ್ವಜನಿಕರಿಗೆಂದು ನಗರದ 10 ಕಡೆಗಳಲ್ಲಿ ಎಲ್‌ಇಡಿ ಪರದೆ ಮೂಲಕ ದೇವಿಯ ನೇರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಯೂಟ್ಯೂಬ್ನಲ್ಲಿಯೂ ದೇವಿಯ ದರ್ಶನದ ಭಾಗ್ಯವನ್ನು ಪಡೆಯಬಹುದಾಗಿದೆ.