ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಕ್ಷಣಗಣನೆ ಆರಂಭ: ಶ್ರೀಮಠ ಮಧುವಣಗಿತ್ತಿಯಂತೆ ಸಿಂಗಾರ - koppal news
ದಕ್ಷಿಣ ಭಾರತದ ಮಹಾಕುಂಭಮೇಳ ಎಂದು ಬಣ್ಣಿತವಾಗಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಶ್ರೀಮಠ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ನಗರದಲ್ಲಿ ಜಾತ್ರೆಯ ಸಂಭ್ರಮ ಕಳೆಗಟ್ಟಿದೆ. ಜನವರಿ 12 ರಂದು ಸಂಜೆ ಮಹಾರಥೋತ್ಸವಕ್ಕೆ ಚಾಲನೆ ಸಿಗಲಿದ್ದು, ಜಾತ್ರೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜಾತ್ರೆಯ ಕುರಿತ ಕಂಪ್ಲೀಟ್ ಮಾಹಿತಿಯನ್ನು ನಮ್ಮ ಕೊಪ್ಪಳ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.