ಸಿಎಎ, ಎನ್ಆರ್ಸಿ ವಿರೋಧಿಸಿ ಫೆ.12ರಿಂದ ದೇಶಾದ್ಯಂತ ಪ್ರತಿಭಟನೆ - CAA and NRC
ಹಾವೇರಿ: ಸಿಎಎ, ಎನ್ಆರ್ಸಿ ವಿರೋಧಿಸಿ ಸಿಪಿಐಎಂ ದೇಶ ವ್ಯಾಪಿ ಫೆಬ್ರವರಿ 12 ರಿಂದ 16 ರವರೆಗೆ ಪ್ರತಿಭಟನೆ ನಡೆಸಲಿದೆ. ಇದಕ್ಕೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಯು.ಬಸವರಾಜ್ ತಿಳಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಎ ಕಾಯ್ದೆಯನ್ನು ವಾಪಸ್ಸು ಪಡೆಯುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ. ಇದೇ ವೇಳೆ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.