ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಆಗಮನ; ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾದ ಸಂಭ್ರಮಾಚರಣೆ - ನೂತನ ಸಚಿವ ಸಿಪಿ ಯೋಗೇಶ್ವರ್
ರಾಮನಗರ: ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಇಂದು ನೂತನ ಸಚಿವ ಸಿಪಿ ಯೋಗೇಶ್ವರ್ ಆಗಮಿಸಿದ್ದು, ಡ್ರೋನ್ ಕ್ಯಾಮರಾದಲ್ಲಿ ದೃಶ್ಯಾವಳಿ ಸೆರೆಹಿಡಿಯಲಾಗಿದೆ. ನೂತನ ಸಚಿವರಿಗೆ ಸ್ವಕ್ಷೇತ್ರದಲ್ಲಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಕೆಂಗಲ್ನಿಂದ ಮೆರವಣಿಗೆ ಮೂಲಕ ಸ್ವ ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಚನ್ನಪಟ್ಟಣ ಕೆಂಗಲ್ ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ನಡೆಸಿದ್ದಾರೆ. ಈ ಸಂದರ್ಭ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು.