ಕಾಲ ಮಿತಿಯೊಳಗೆ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಸಿಪಿಐಎಂ ಪ್ರತಿಭಟನೆ - ಕೊಡಗು
ಕೊಡಗು: ನೆರೆ ಸಂತ್ರಸ್ತರಿಗೆ ಕಾಲಮಿತಿಯೊಳಗೆ ಶಾಶ್ವತ ನಿವೇಶನ ಒದಗಿಸುವಂತೆ ಆಗ್ರಹಿಸಿ ಸಿಪಿಐಎಂ ಸಂಘಟನೆಯಿಂದ ಜಿಲ್ಲೆಯ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಳೆದ ವರ್ಷ ಹಾಗೂ ಇತ್ತೀಚೆಗೆ ಸುರಿದ ಮಹಾಮಳೆಗೆ ಸಾವಿರಾರು ಮಂದಿ ನೆಲೆಗಳನ್ನು ಕಳೆದುಕೊಂಡು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಪರಿಹಾರ ಒದಗಿಸುವಲ್ಲಿ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಆರೋಪಿಸಿ, ಜಿಲ್ಲಾಡಳಿತ ಹಾಗೂ ಗ್ರಾಮ ಪಂಚಾಯತ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು 10 ದಿನಗಳ ಒಳಗೆ ಪರಿಹಾರ ಒದಗಿಸಬೇಕು. ಇಲ್ಲವಾದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ರು.