ತುಮಕೂರು: ಮತ ಎಣಿಕೆ ಕೇಂದ್ರದ ಬಳಿಯೇ ಪಟಾಕಿ ಮಾರಾಟ ! - vote counting center
ತುಮಕೂರು: ನಿಯಮಗಳನ್ನು ಉಲ್ಲಂಘಿಸಿ ಗುಬ್ಬಿ ಪಟ್ಟಣದ ಮತ ಎಣಿಕೆ ಕೇಂದ್ರದ ಬಳಿಯೇ ರಾಜಾರೋಷವಾಗಿ ಪಟಾಕಿ ಮಾರಾಟ ಮಾಡುತ್ತಿದ್ದುದು ಕಂಡುಬಂದಿದೆ. ಕೋವಿಡ್ ನಿಯಮಾವಳಿ ಪ್ರಕಾರ ಪಟಾಕಿ ಸಿಡಿಸುವುದನ್ನು ಈಗಾಗಲೇ ಸರ್ಕಾರ ನಿಷೇಧಿಸಿದೆ. ಅದರಲ್ಲೂ ವಿಜೇತ ಅಭ್ಯರ್ಥಿಗಳು ಸಂಭ್ರಮಾಚರಣೆಯಲ್ಲಿ ಪಟಾಕಿ ಬಳಸಿದಂತೆ ಸೂಚನೆ ನೀಡಲಾಗಿದ್ದರೂ ಕೂಡ ಗುಬ್ಬಿ ಪಟ್ಟಣದ ಮತ ಎಣಿಕೆ ಕೇಂದ್ರದ ಬಳಿಯೇ ಪಟಾಕಿ ಮಾರಾಟ ಮಾಡಲಾಗುತ್ತಿದೆ. ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಮೌನವಹಿಸಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.