ಪಾಕಿಸ್ತಾನ ವಿರುದ್ಧ ಭಾರತ ಗೆಲ್ಲಲಿ: ಅಭಿಮಾನಿಗಳಿಂದ ಆಲ್ ದಿಬೆಸ್ಟ್ - undefined
ಬೆಂಗಳೂರು: ನಾಳೆ ಭಾರತ ಮತ್ತು ಪಾಕಿಸ್ತಾನ ನಡುವೆ ವಿಶ್ವ ಕಪ್ ಪಂದ್ಯ ನಡೆಯುತ್ತಿದ್ದು, ಕ್ರಿಕೆಟ್ ಅಭಿಮಾನಿಗಳು ವಿರಾಟ್ ಪಡೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಬದ್ದ ವೈರಿಗಳ ಪಂದ್ಯವನ್ನು ನೋಡಲು ಇಡೀ ವಿಶ್ವವೇ ಎದುರು ನೋಡುತ್ತಿದೆ. ಈ ಪಂದ್ಯ ಎರಡು ದೇಶಗಳ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಗೆಲ್ಲಲೇಬೇಕೆಂಬ ಒತ್ತಡದಲ್ಲಿವೆ. ಈವರೆಗೂ ಎಲ್ಲಾ ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನದ ವಿರುದ್ಧ ಜಯ ಸಾಧಿಸಿದೆ. ಈ ಬಾರಿ ಕೂಡ ಗೆಲುವಿನ ಮೂಮೆಂಟಮ್ಅನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಇಡೀ ಭಾರತವೇ ಪೂಜೆ ಪುನಸ್ಕಾರಗಳಲ್ಲಿ ತೊಡಗಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರು ಪೂಜಾ ಕೈಂಕರ್ಯ ಕೈಗೊಂಡಿದ್ದು, ಭಾರತ ತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.