ಸುಳ್ಯ: ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿ - ಅಪಾರ ಪ್ರಮಾಣದ ಬೆಳೆ ಹಾನಿ
ಸುಳ್ಯ: ಭಾನುವಾರ ಸಂಜೆ ಸುರಿದ ಗುಡುಗು ಸಹಿತ ಭಾರೀ ಮಳೆಗೆ ಸುಳ್ಯ, ಕಡಬ ತಾಲೂಕಿನ ವಿವಿಧೆಡೆ ಹಲವು ಮನೆಗಳಿಗೆ, ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಅಪಾರ ಬೆಳೆ ನಷ್ಟವಾಗಿದೆ. ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪಟ್ರೋಡಿ ಎಂಬಲ್ಲಿ ಬೀಸಿದ ಭಾರಿ ಮಳೆಗೆ ಅಡಕೆ ಮರಗಳು ಸೇರಿದಂತೆ ಹಲವು ಮರಗಳು ಧರೆಗುರುಳಿವೆ. ಕಡಬ ಪೇಟೆಯ ಹೊಯಿಗೆಕೆರೆ ಎಂಬಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಮರ ಹೊತ್ತಿ ಉರಿಯುತ್ತಿದ್ದ ದೃಶ್ಯ ಕಂಡುಬಂದಿದೆ.