ಯಾದಗಿರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಸಿ.ಟಿ.ರವಿ - ಸಿ ಟಿ ರವಿ ಯಾದಗಿರಿ ಪ್ರಗತಿ ಪರಿಶೀಲನಾ ಸಭೆ
ಯಾದಗಿರಿ ಜಿಲ್ಲೆಯಲ್ಲಿಂದು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಕ್ಕರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದಂತಹ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು. ಸಭೆಯಲ್ಲಿ ಸುರಪುರ ಶಾಸಕ ರಾಜುಗೌಡ, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ ಹಾಗೂ ಶಹಾಪುರ ಶಾಸಕ ಶರಣಬಸಪ್ಪಗೌಡ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.