ಕಾಂಗ್ರೆಸ್ನವರ ತಟ್ಟೆಯಲ್ಲಿ ಹೆಗ್ಗಣ ಬಿದ್ರೂ, ಬೇರೆಯವರ ಕಡೆಯೇ ಬೊಟ್ಟು ಮಾಡಿ ತೋರಿಸುತ್ತಾರೆ - ಇಂದು ಶಾಸಕಾಂಗ ಸಭೆ
ಕಾಂಗ್ರೆಸ್ನವರಿಗೆ ಕೇವಲ ಬೇರೆಯವರ ಮೇಲೆ ಬೊಟ್ಟು ಮಾಡಿ ತೋರಿಸುವುದೇ ಕೆಲಸ ಎಂದು ಶಿವಮೊಗ್ಗದಲ್ಲಿ ಕ್ರೀಡಾ ಸಚಿವ ಸಿ.ಟಿ. ರವಿ ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಅವರ ಪಕ್ಷದ ವಿಚಾರ ಬಿಟ್ಟು, ಬೇರೆಯವರ ಮೇಲೆ ಆರೋಪಿಸುವುದರಲ್ಲೇ ಬ್ಯುಸಿಯಾಗಿದ್ದಾರೆ. ಅವರಿಗೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿರುವುದು ಕಂಡು ಬರುತ್ತಿಲ್ಲ ಎಂದು ಹರಿಹಾಯ್ದರು.