ಕರ್ನಾಟಕ

karnataka

By

Published : Jun 29, 2020, 1:52 PM IST

ETV Bharat / videos

ನಿತ್ಯ ರಾತ್ರಿ 8 ಗಂಟೆಯಿಂದ ಸಿಲಿಕಾನ್ ಸಿಟಿ ಸಂಪೂರ್ಣ ಸ್ತಬ್ದ

ಕೊರೊನಾ ಸೋಂಕಿತರ ಸಂಖ್ಯೆ ನಿತ್ಯ ಹೆಚ್ಚಾಗುತ್ತಿರುವ ಕಾರಣ, ಸಿಲಿಕಾನ್​​ ಸಿಟಿಯಲ್ಲಿ ಇಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ. ಸದ್ಯ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿದ್ದು, ಇದೀಗ ರಾತ್ರಿ ಕರ್ಫ್ಯೂ ಅವಧಿಯನ್ನ ಒಂದು ಗಂಟೆ ವಿಸ್ತರಿಸಲಾಗಿದೆ. ಕರ್ಫ್ಯೂ ಸಮಯದಲ್ಲಿ ಯಾರೂ ಕೂಡ ಅನಗತ್ಯವಾಗಿ ಓಡಾಟ ಮಾಡುವ ಹಾಗಿಲ್ಲ. ಹಾಗೂ ಅಂಗಡಿ ಮುಂಗಟ್ಟುಗಳನ್ನ ತೆರೆಯುವಂತಿಲ್ಲ. ಒಂದು ವೇಳೆ, ನಿಯಮ ಉಲ್ಲಂಘನೆ ಮಾಡಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಪೊಲೀಸರು ನಿರ್ಧರಿಸಿದ್ದಾರೆ.

ABOUT THE AUTHOR

...view details