ಹಾಸನದಲ್ಲಿ ಜನತಾ ಕರ್ಪ್ಯೂಗೆ ಜನರಿಂದ ಸಂಪೂರ್ಣ ಬೆಂಬಲ
ಹಾಸನ: ಕೋವಿಡ್-19 ಹಿನ್ನೆಲೆ ಸರ್ಕಾರ ಇಂದು ಜನತಾ ಕರ್ಫೂ ಆದೇಶ ನೀಡಿರುವುದರಿಂದ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಜಿಲ್ಲೆ ಸಂಪೂರ್ಣ ಬಂದ್ ಆಗಿದೆ. ಬೆಳಗ್ಗೆಯಿಂದ ಲಾಕ್ಡೌನ್ ಮಾಡಲಾಗಿದೆ. ಹಾಲು, ತರಕಾರಿ, ದಿನಸಿಗಳು, ಆಸ್ಪತ್ರೆ-ಮೆಡಿಕಲ್ ಹೀಗೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದಂತೆ ಅಂಗಡಿ-ಮುಂಗಟ್ಟುಗಳು, ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲವೂ ಸ್ತಬ್ಧವಾಗಿದ್ದು, ಜನರ ಅನಗತ್ಯ ಓಡಾಟಕ್ಕೆ ಪೊಲೀಸ್ ಇಲಾಖೆ ಕಡಿವಾಣ ಹಾಕಿದೆ.