ಸಿಲಿಂಡರ್ ಸ್ಫೋಟ: ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆ ಛಿದ್ರವಾಗಿ ಹೊತ್ತಿ ಉರಿದಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಭೂತನ ಪೈಸಾರಿಯಲ್ಲಿ ನಡೆದಿದೆ. ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂತನ ಪೈಸಾರಿ ನಿವಾಸಿ ಸರೋಜಾ ಹಾಗೂ ಮಣಿ ಎಂಬುವರ ಮನೆಗಳಿಗೆ ಬೆಂಕಿಯಿಂದ ಭಾರಿ ಹಾನಿಯಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಿಲಿಂಡರ್ ಸ್ಪೋಟಗೊಂಡಿದ್ದರಿಂದ ಸದ್ಯ ದೊಡ್ಡ ಅನಾಹುತವೊಂದು ತಪ್ಪಿದೆ. ಸಿಲಿಂಡರ್ ಸ್ಪೋಟದ ರಭಸಕ್ಕೆ ಮನೆಗೋಡೆಗಳು ಛಿದ್ರವಾಗಿವೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.