ಡಿಕೆಶಿ ಬಂಧನ ಹಿನ್ನೆಲೆ: ನಾಳೆ ರಾಮನಗರ ಬಂದ್, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ - ರಾಮನಗರ
ದೆಹಲಿ ಕೋರ್ಟ್ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ರನ್ನು ಇಡಿ ವಶಕ್ಕೆ ನೀಡಿದ ಹಿನ್ನೆಲೆಯಲ್ಲಿ ಕನಕಪುರದಲ್ಲಿ ಮತ್ತೆ ಪ್ರತಿಭಟನಾ ಕಾವು ಹೆಚ್ಚಾಗಿದೆ. ನಾಳೆ ರಾಮನಗರ ಜಿಲ್ಲೆ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕಲ್ಪಿಸಲಾಗಿದೆ. ಅದಕ್ಕಾಗಿ ಈಗಾಗಲೇ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸುಮಾರು 300 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಈಗಾಗಲೇ ಹಲವರನ್ನು ಪೊಲೀಸರು ಕನಕಪುರದಲ್ಲಿ ವಶಕ್ಕೆ ಪಡೆದಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಆದೇಶ ಹೊರಡಿಸಿದ್ದಾರೆ.