ಕರ್ನಾಟಕ

karnataka

ETV Bharat / videos

ಗದಗ : ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು, ಬೆಳೆ ನಾಶ - Damage to drinking water pipes

By

Published : Sep 19, 2020, 3:57 PM IST

ಮುಂಡರಗಿಯ ಕನಕರಾಯನಗುಡ್ಡದ ಪಕ್ಕದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಒಡೆದ ಪರಿಣಾಮ, ಪಕ್ಕದಲ್ಲಿದ್ದ ಜಮೀನುಗಳಿಗೆ ನೀರು ನುಗ್ಗಿ ಟೊಮ್ಯಾಟೊ, ಬದನೆಕಾಯಿ ಸೇರಿ ವಿವಿಧ ತರಕಾರಿ ಬೆಳೆ ನೀರು ಪಾಲಾಗಿದೆ. ಹಮ್ಮಗಿ ಬ್ಯಾರೇಜ್ ನಿಂದ ಗದಗ ಬೆಟಗೇರಿ ಅವಳಿ ನಗರಕ್ಕೆ 24×7 ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಇದಾಗಿದೆ. ವಿಷಯ ತಿಳಿದ ನಂತರ ಸ್ಥಳಕ್ಕೆ ಬಂದ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಪರಿಸ್ಥಿತಿ ನೋಡಿ ಸುಮ್ಮನೆ ತೆರಳಿದ್ದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ನಾಲ್ಕು ದಿನಗಳಿಂದಲೂ ನೀರು ಪೋಲಾಗುತ್ತಿದ್ದರೂ ಸರಿಪಡಿಸುವ ಕೆಲಸಕ್ಕೆ ಅಧಿಕಾರಿಗಳು ಮುಂದಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details