ಕರ್ನಾಟಕ

karnataka

ETV Bharat / videos

ರಾಯಚೂರಿನಲ್ಲಿ ಅದ್ದೂರಿ ದಸರಾ, ಮೆರವಣಿಗೆಯಲ್ಲಿ ಕಲಾ ತಂಡಗಳಿಂದ ಆಕರ್ಷಕ ಪ್ರದರ್ಶನ - ಕಲಾ ತಂಡಗಳಿಂದ ಪ್ರದರ್ಶನ ಮೆರವಣಿಗೆ

By

Published : Oct 8, 2019, 7:54 PM IST

ರಾಯಚೂರಿನಲ್ಲಿ ಅದ್ಧೂರಿಯಾಗಿ ದಸರಾ ಮೆರವಣಿಗೆ ನಡೆಯಿತು. ಕಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಮಹಿಳೆಯರ ಕುಂಬ ಕಳಸ ಸೇರಿದಂತೆ ವಿವಿಧ ಕಲಾ ತಂಡಗಳ ಪ್ರದರ್ಶನ ನೆರೆದಿದ್ದವರ ಮನಸೂರೆಗಳಿಸಿತು. ಮೆರವಣಿಗೆಯಲ್ಲಿ ಕಲಾ ತಂಡಗಳ ಪ್ರದರ್ಶನಕ್ಕೆ ನಗರಸಭೆ ಸಿಬ್ಬಂದಿ, ಯುವಕರು ಕುಣಿದು ಕುಪ್ಪಳಿಸಿದರು. ನಗರಸಭೆ, ಕನ್ನಡ ಮತ್ತು ಸಂಸ್ಕ್ರತಿ‌ ಇಲಾಖೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ದಸರಾ ಆಯೋಜಿಸಲಾಗಿದೆ.

ABOUT THE AUTHOR

...view details