ದಾವಣಗೆರೆ.. ಗಣಪತಿ ಹಬ್ಬ ಹಿನ್ನೆಲೆ ರಸ್ತೆ ಬದಿ ವ್ಯಾಪಾರಿಗಳು ತಾತ್ಕಾಲಿಕ ಮಾರುಕಟ್ಟೆಗೆ ಶಿಫ್ಟ್.. - Ganpati Festival
ದಾವಣಗೆರೆ: ಗಣಪತಿ ಹಬ್ಬದ ಹಿನ್ನೆಲೆ ನಗರದ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅಡೆತಡೆ ಉಂಟಾಗದಂತೆ ತಡೆಯಲು ಮಹಾನಗರ ಪಾಲಿಕೆ ಮುಂದಾಗಿದ್ದು, ರಸ್ತೆಯ ಬದಿಯಲ್ಲಿ ನಡೆಯುತ್ತಿದ್ದ ಮಾರುಕಟ್ಟೆಯನ್ನು ಹೈಸ್ಕೂಲ್ ಮೈದಾನಕ್ಕೆ ಶಿಫ್ಟ್ ಮಾಡಿದೆ. ಹಬ್ಬದ ಹಿನ್ನಲೆ ಹೂವು, ಹಣ್ಣು, ಪೂಜೆ ವಸ್ತುಗಳನ್ನು ರಸ್ತೆ ಬದಿಗಳಲ್ಲಿ ಇಟ್ಟು ಮಾರಾಟ ಮಾಡಲಾಗುತ್ತಿತ್ತು. ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿತ್ತು. ಈ ಹಿನ್ನೆಲೆ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ, ಹೈಸ್ಕೂಲ್ ಮೈದಾನದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಸ್ ಸ್ಟ್ಯಾಂಡ್ಗೆ ಮಾರುಕಟ್ಟೆಯನ್ನು ಸ್ಥಳಾಂತರ ಮಾಡಿದ್ದಾರೆ.
Last Updated : Sep 1, 2019, 8:35 PM IST