ಹುತಾತ್ಮ ಯೋಧರಿಗೆ ಚಿತ್ರದುರ್ಗ ಜಿಲ್ಲಾಡಳಿತದ ನಮನ - martyrs day in chitradurga dc office
ಹುತಾತ್ಮ ಯೋಧರ ಸಂಸ್ಮರಣಾ ದಿನೋತ್ಸವದ ನಿಮಿತ್ತ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೌನಾಚರಣೆ ಸಲ್ಲಿಸಿ ಮಡಿದ ಯೋಧರಿಗೆ ಗೌರವ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಕವಿತಾ ಮನ್ನಿಕೇರಿ ನೇತೃತ್ವದಲ್ಲಿ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಬಳಿಕ ಎರಡು ನಿಮಿಷ ಮೌನಾಚರಣೆ ಮಾಡಿ, ದೇಶಕ್ಕಾಗಿ ಪ್ರಾಣತೆತ್ತ ವೀರ ಯೋಧರಿಗೆ ಗೌರವ ಸಲ್ಲಿಸಿದರು. ಈ ವೇಳೆ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ರು.