ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ: ಮತ ಎಣಿಕೆಗೆ ನಡೆದಿದೆ ಸಿದ್ಧತೆ - ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ
ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ನಗರದ ರೊಸಾರಿಯೋ ಶಿಕ್ಷಣ ಸಂಸ್ಥೆಯಲ್ಲಿ ಮತ ಎಣಿಕೆ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ.60 ವಾರ್ಡುಗಳಿಗೆ 180 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಅಭ್ಯರ್ಥಿಗಳ ಭವಿಷ್ಯ ನಾಳೆ ಮಧ್ಯಾಹ್ನದೊಳಗಾಗಿ ಹೊರಬರಲಿದೆ.