ಕರ್ನಾಟಕ

karnataka

ETV Bharat / videos

ಕೊರೊನಾ ಮಧ್ಯೆಯೂ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ: ಡಿಸಿಎಂ ಕಾರಜೋಳ - Deputy Chief Minister Govinda Karajola

By

Published : Sep 21, 2020, 12:12 PM IST

ಕೋವಿಡ್​​​ನಿಂದ ಎಲ್ಲರಿಗೂ ತೊಂದರೆಯಾಗಿದೆ. ಇದರಿಂದ ಸರ್ಕಾರಕ್ಕೆ ಬರಬೇಕಾದ ಆದಾಯ ಬರುತ್ತಿಲ್ಲ ಎಂದು ಡಿಸಿಎಂ ಗೋವಿಂದ ಎಂ. ಕಾರಜೋಳ ಹೇಳಿದರು. ಅಧಿವೇಶನಕ್ಕೂ ಮುನ್ನ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ಮಧ್ಯೆಯೂ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದರು. ಸಮಸ್ಯೆಗಳ ಮಧ್ಯೆಯೇ ಸದನವನ್ನು ನಡೆಸುತ್ತಿದ್ದೇವೆ. ಇದು ಸಹ ಯಶಸ್ವಿಯಾಗುತ್ತದೆ ಎಂದ ಅವರು, ರಾಜ್ಯದಲ್ಲಿ ಮಳೆಯಿಂದ ಹಾನಿಯಾಗಿರುವ ರಸ್ತೆ- ಸೇತುವೆಗಳ ದುರಸ್ತಿ ಮಾಡುವ ಕೆಲಸ ನಡೆಯುತ್ತಿದೆ. ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣಕ್ಕೆ ಈಗಾಗಲೇ ಐದು ಲಕ್ಷ ರೂ. ನೀಡಲಾಗಿದೆ ಎಂದು ತಿಳಿಸಿದರು.

ABOUT THE AUTHOR

...view details