ಕೀಳು ಮಟ್ಟದ ಭಾಷೆ ಬಳಕೆ ಸಿದ್ದರಾಮಯ್ಯಗೆ ಶೋಭಿಸುವುದಿಲ್ಲ.. ಡಿಸಿಎಂ ಕಾರಜೋಳ - ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
ಹುಬ್ಬಳ್ಳಿ:ಸಿದ್ದರಾಮಯ್ಯ ಅವರು ಹಿರಿಯ ರಾಜಕಾರಣಿ. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಈ ರೀತಿ ಕೀಳಾಗಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ. ಸಿದ್ದರಾಮಯ್ಯ ಅವರು ಮೊದಲು ಇತಿಹಾಸ ತಿಳಿದುಕೊಳ್ಳಲಿ. ಜವಾಬ್ದಾರಿಯುತವಾಗಿ ಮಾತನಾಡುವುದನ್ನ ಕಲಿಯಲಿ. ಅವರು ಅರ್ಥ ಮಾಡಿಕೊಳ್ಳಬೇಕೆಂದು ಸೂಕ್ಷ್ಮವಾಗಿ ಹೇಳುತ್ತೇನೆ ಅಂತಾ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದರು.