ಲಸಿಕೆ ಹಾಕಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಲು ಚಾಲಕ, ನಿರ್ವಾಹಕರಿಗೆ ಸೂಚನೆ: ಡಿಸಿಎಂ ಲಕ್ಷ್ಮಣ ಸವದಿ - ಬೆಂಗಳೂರು ಲಸಿಕೆ ಸುದ್ದಿ
ಬೆಂಗಳೂರು: ಬೆಳಗ್ಗೆ ಬಿಎಂಟಿಸಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದರಿಂದ ಗೊಂದಲ ಉಂಟಾಗಿತ್ತು. ಬಸ್ ಚಾಲಕ ಮತ್ತು ನಿರ್ವಾಹಕರು ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಲು ಸೂಚಿಸಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. ಅನೇಕ ಚಾಲಕ, ನಿರ್ವಾಹಕರು ಉತ್ತರ ಕರ್ನಾಟಕದ ಸಿಬ್ಬಂದಿ ಇದ್ದಾರೆ. ಲಾಕ್ಡೌನ್ ವೇಳೆಯಲ್ಲಿ ಅವರೆಲ್ಲ ತಮ್ಮ ತಮ್ಮ ಊರುಗಳಿಗೆ ತೆರಳಿದ್ದರು. ಉತ್ತರ ಕರ್ನಾಟಕದ ಸಿಬ್ಬಂದಿ ಇಂದು ರಾತ್ರಿ ವೇಳೆಗೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ನಾಳೆ ಹೊತ್ತಿಗೆ ಎಲ್ಲ ವ್ಯವಸ್ಥೆ ಸುಧಾರಿಸಲಿದೆ ಎಂದರು.